ಬೆಂಗಳೂರು: ಅನ್ಯ ರಾಜ್ಯದಿಂದ ನಟಿಯಾಗಿ ಕರ್ನಾಟಕಕ್ಕೆ ಆಗಮಿಸಿ ಪರಭಾಷಿಯಾಗಿದ್ದೂ ಸ್ಪಷ್ಟವಾಗಿ ಕನ್ನಡ ಮಾತನಾಡಲು, ಬರೆಯಲು ಕಲಿತು ಇತರರಿಗೂ ಕನ್ನಡ ಕಲಿಸುವ ಯೋಜನೆಯನ್ನು ಯಶಸ್ವಿಗೊಳಿಸಲು ಶ್ರಮವಹಿಸುತ್ತಿರುವ ನಟಿ ಪೂಜಾ ಗಾಂಧಿ ಇಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಿ ಕನ್ನಡ ಪ್ರೇಮ ಮೆರೆದರು.
ಪೂಜಾ ಗಾಂಧಿ ಕನ್ನಡಭಿಮಾನಿಯಾಗಿರುವ ಜೊತೆಗೆ ಕಾವೇರಿ ಹೋರಾಟದಲ್ಲಿಯೂ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಇವರ ಕನ್ನಡ ಪ್ರೀತಿಗೆ ಕನ್ನಡಿಗರು ಋಣಿಯಾಗಿದ್ದಾರೆ.












