udupixpress
Home ದೇಶ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ: ನಟಿ ರಿಯಾ ಚಕ್ರವರ್ತಿ ಅರೆಸ್ಟ್

ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ: ನಟಿ ರಿಯಾ ಚಕ್ರವರ್ತಿ ಅರೆಸ್ಟ್

ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ನಂಟಿನ ಕುರಿತು ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ನಟಿ ರಿಯಾ ಚಕ್ರವರ್ತಿಯನ್ನು ಇಂದು ಬಂಧಿಸಿದ್ದಾರೆ.

ಕಳೆದ ಮೂರು ದಿನಗಳಿಂದ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ಇಂದು ಬಂಧಿಸಿದ್ದು, ಇಂದು ಸಂಜೆ ಐದು ಗಂಟೆಯ ಸುಮಾರಿಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ ಎಂದು ವರದಿಯಾಗಿದೆ.

ಡ್ರಗ್ಸ್ ಪೂರೈಕೆ, ಬಳಕೆ ಸಂಬಂಧಿಸಿದ ಪ್ರಕರಣದಲ್ಲಿ ರಿಯಾ ಸಹೋದರ ಶೋವಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ಹೌಸ್ ಮ್ಯಾನೇಜರ್ ಸ್ಯಾಮ್ಯಯೆಲ್ ಮಿರಾಂಡ ಮತ್ತು ದಿಪೇಶ್ ಸಾವಂತ್ ರನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.