ನಟಿ ಸಂಜನಾ ಗಲ್ರಾನಿಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು: ಡ್ರಗ್ಸ್ ಜಾಲದ ನಂಟಿನ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಅವರಿಗೆ ಹೈಕೋರ್ಟ್‌ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

₹3 ಲಕ್ಷ ಮೊತ್ತಕ್ಕೆ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಒದಗಿಸಬೇಕು ಎಂಬ ಷರತ್ತಿನ ಆಧಾರದಲ್ಲಿ ಕೋರ್ಟ್ ಜಾಮೀನು ನೀಡಿದೆ.