ಬೆಂಗಳೂರು: ಡ್ರಗ್ಸ್ ಜಾಲದ ನಂಟಿನ ಆರೋಪಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ವಿಡಿಯೋ ಕನ್ಫೋರೆನ್ಸ್ ಮೂಲಕ ನಗರದ 8ನೇ ಎಸಿಎಂಎಂ ಕೋರ್ಟ್ನಲ್ಲಿ ವಿಚಾರಣೆ ನಡೆಯಿತು. ಹೆಚ್ಚಿನ ವಿಚಾರಣೆಗಾಗಿ ಸಂಜನಾಳನ್ನು 9 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಸಿಸಿಬಿ ಪೊಲೀಸರು ಕೋರ್ಟ್ಗೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯ 5 ದಿನಗಳ ಕಾಲ ಸಿಸಿಬಿ ಕಸ್ಟಡಿ ನೀಡಿ ಎಂದು ಆದೇಶ ನೀಡಿದೆ.
ಡ್ರಗ್ಸ್ ಜಾಲದ ನಂಟಿಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಸಿಸಿಬಿ ಪೊಲೀಸರು ಸಂಜನಾ ಮನೆಗೆ ದಾಳಿ ನಡೆಸಿ, ಶೋಧಕಾರ್ಯ ನಡೆಸಿದ್ದರು. ಬಳಿಕ ಸೂಕ್ತ ಸಾಕ್ಷ್ಯಾಧಾರಗಳು ದೊರೆತ ಹಿನ್ನೆಲೆಯಲ್ಲಿ ಆಕೆಯನ್ನು ಬಂಧನ ಮಾಡಿದ್ದರು.