ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 6 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಇದು ಜನರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಇಂದು ಸಂಜೆ 6 ಗಂಟೆಗೆ ದೇಶದ ನನ್ನ ಜನರೊಂದಿಗೆ ಒಂದು ಸಂದೇಶ ಹಂಚಿಕೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ನವರಾತ್ರಿ, ದೀಪಾವಳಿ ಹಬ್ಬದ ಬಗ್ಗೆ ಪ್ರಯುಕ್ತ ಮಾತನಾಡಲಿದ್ದಾರಾ? ಅಥವಾ ದೇಶದಲ್ಲಿ ಅಭಿವೃದ್ಧಿಪಡಿಸುತ್ತಿರುವ ಕೊರೊನಾ ಲಸಿಕೆಯ ಕುರಿತು ಮಾತನಾಡುತ್ತಾರೋ ಎನ್ನುವುದನ್ನು ಕಾದುನೋಡಬೇಕಿದೆ. ಪ್ರಧಾನಿ ತುರ್ತಾಗಿ ದೇಶವನ್ನು ಉದ್ದೇಶಿಸಿ ಮಾತನಾಡಲು ಮುಂದಾಗಿರುವುದು ಜನರಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದೆ.