ಬೆಂಗಳೂರು: ಹಾಲಿ ಚಾಂಪಿಯನ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ ಇತಿಹಾಸದಲ್ಲೇ ಭಾರೀ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ ಎಂದು ವರದಿಯಾಗಿದೆ.
ನಾಲ್ಕು ದೈತ್ಯ ಕಂಪನಿಗಳು ಜಂಟಿಯಾಗಿ ಆರ್ ಸಿಬಿ ಫ್ರಾಂಚೈಸಿಯನ್ನು ಬರೋಬ್ಬರಿ 178 ಬಿಲಿಯನ್ ಡಾಲರ್(16,600 ಕೋಟಿ ರೂ.)ಗೆ ಖರೀದಿ ಮಾಡಿದೆ ಎಂದು ವರದಿಯಾಗಿದೆ.
ಡಿಯಾಜಿಯೊ ಸಂಸ್ಥೆಯಿಂದ ಆರ್ ಸಿಬಿ ತಂಡವನ್ನು ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಡ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ ಜಂಟಿಯಾಗಿ ಖರೀದಿ ಮಾಡಿದೆ ಎಂದು ಕ್ರೀಡಾ ವಲಯದಲ್ಲಿ ಸುದ್ದಿ ಹರಿದಾಡಿದೆ.
16,600 ಕೋಟಿ ರೂ. ಅಂದರೆ ಐಪಿಎಲ್ ಇತಿಹಾಸದಲ್ಲೇ ಆಗಿರುವ ಗರಿಷ್ಠ ಒಪ್ಪಂದ ಇದಾಗಿದೆ.
ಆದಿತ್ಯ ಬಿರ್ಲಾ ಗ್ರೂಪ್‌ನ ನಿರ್ದೇಶಕ ಆರ್ಯಮಾನ್ ವಿಕ್ರಮ್ ಬಿರ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ಗ್ರೂಪ್‌ನ ಸತ್ಯನ್ ಗಜ್ಞಾನಿ ಫ್ರಾಂಚೈಸಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.
















