ವಸತಿ ಶಾಲೆಗಳ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ

ಉಡುಪಿ: ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯು ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಾದ ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾರ್ಚ್ 12 ರಂದು ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.