ಉಡುಪಿ: ಮೂಡಬಿದಿರೆಯ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್ಮೆಂಟ್ ಇಲ್ಲಿ ಪ್ರಸಕ್ತ ಸಾಲಿನ ಜುಲೈ ರಿಂದ ಪ್ರಾರಂಭವಾಗಿರುವ 6 ತಿಂಗಳ ಅವಧಿಯ ರೆಗ್ಯುಲರ್ ಮತ್ತು ದೂರಶಿಕ್ಷಣ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್” ಪ್ರವೇಶಾತಿಗಾಗಿ ಹತ್ತನೇ ತರಗತಿ ಉತ್ತೀರ್ಣರಾದ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 18 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08258-236561, 7022429440, 8971361396 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ನ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

















