ಉಡುಪಿ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ಮತ್ತು ಓರೇನ್ ಇಂಟರ್ನ್ಯಾಷನಲ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾಸ್ಮೆಟಾಲಜಿ ಕ್ಷೇತ್ರದಲ್ಲಿ ಬ್ಯಾಚುಲರ್ ಪದವಿ ಕೋರ್ಸ್ಗಳಿಗೆ 2026–27ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿವೆ.
ಸೌಂದರ್ಯ ವೃತ್ತಿಪರರ ಮುಂದಿನ ಪೀಳಿಗೆಯನ್ನು ಸಬಲಗೊಳಿಸುವ ಉದ್ದೇಶದಿಂದ ರೂಪಿಸಲಾದ ಈ ಕೋರ್ಸ್ನಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತರಬೇತಿ ನೀಡಲಾಗುತ್ತದೆ. ಯುಜಿಸಿ ಮಾನ್ಯತೆ ಪಡೆದ ಪದವಿಯಾಗಿರುವುದರಿಂದ ಸರ್ಕಾರ ಹಾಗೂ ಖಾಸಗಿ ವಲಯಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.
ಈ ಕೋರ್ಸ್ನಲ್ಲಿ ಮಾಸ್ಟರ್ ಕಾಸ್ಮೆಟಾಲಜಿ, ಮೇಕಪ್, ಕೂದಲು ಆರೈಕೆ, ನೇಲ್ ಆರ್ಟ್ ಸೇರಿದಂತೆ ಹಲವು ವಿಷಯಗಳಲ್ಲಿ ತರಬೇತಿ ನೀಡಲಾಗುತ್ತದೆ. 12ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಕೆಲಸ ನಿರ್ವಹಿಸುತ್ತಿರುವ ವೃತ್ತಿಪರರೂ ಕೂಡ ಪ್ರವೇಶ ಪಡೆಯಲು ಅರ್ಹರಾಗಿದ್ದಾರೆ.
ಅಂತರರಾಷ್ಟ್ರೀಯ ಪ್ರಮಾಣಿತ ತರಬೇತುದಾರರಿಂದ ಆಧುನಿಕ ಪ್ರಯೋಗಾಲಯಗಳಲ್ಲಿ ತರಬೇತಿ ನೀಡಲಾಗುತ್ತಿದ್ದು, ಪ್ರಮುಖ ಬ್ಯೂಟಿ ಮತ್ತು ವೆಲ್ನೆಸ್ ಬ್ರ್ಯಾಂಡ್ಗಳಲ್ಲಿ ಉದ್ಯೋಗಾವಕಾಶಗಳನ್ನೂ ಒದಗಿಸಲಾಗುತ್ತದೆ. ಜೊತೆಗೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ (Scholarship) ಸೌಲಭ್ಯವೂ ಲಭ್ಯವಿದೆ.
ಆಸಕ್ತರು ಶೀಘ್ರವೇ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಸೀಮಿತ ಸೀಟುಗಳಿದೆ. ತಕ್ಷಣ ಸಂಪರ್ಕಿಸಿ 8123165068

















