ಗರಿಷ್ಠ ಉದ್ಯೋಗ ಭರ್ತಿ ಸಾಧಿಸಿರುವ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‌ನಲ್ಲಿ ಪ್ರವೇಶಾತಿ ಆರಂಭ

ಮಣಿಪಾಲ: ಕಳೆದ 10 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶ್ರೀ ಶಾರದ ಶಿಕ್ಷಕಿ ತರಬೇತಿ ಸಂಸ್ಥೆಯ 2021-22 ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ, ಕುಂದಾಪುರ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 90% ರಷ್ಟು ಉದ್ಯೋಗ ಲಭಿಸಿದೆ.

ಮೇಲ್ಕಂಡ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.

ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜ್‌ ಇದರ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು.

ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‌, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 2ನೇ ಮಹಡಿ ಇಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ದೂರವಾಣಿ ಸಂಖ್ಯೆ: 9901722527 ಗೆ ಕರೆ ಮಾಡಬಹುದು ಎಂದು ಸಂಸ್ಥೆ ತಿಳಿಸಿದೆ.