ಸ್ಯಾಂಡಲ್ವುಡ್ನ ಖ್ಯಾತ ಕಾಮಿಡಿಯನ್ ಹಾಗೂ ಹಿರಿಯ ನಟ ಮಂಡ್ಯ ರಮೇಶ್ ಅವರು ದಿಢೀರ್ ಅಸ್ವಸ್ಥರಾಗಿದ್ದು.. ಅವರನ್ನು ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ..ಸದ್ಯ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಇದೀಗ ಈ ಬಗ್ಗೆ ಮಂಡ್ಯ ರಮೇಶ್ ಅವರ ಪತ್ನಿ ಸರೋಜಾ ಹೆಗಡೆ ಮಾಹಿತಿ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ನಾಳೆ ಆಸ್ಪತ್ರೆಯಿಂದ ನಟ ಮಂಡ್ಯ ರಮೇಶ್ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿದೆ.. ಸದ್ಯ ರಮೇಶ್ ಅವರು ಸೂಕ್ತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖವಾಗುವ ಹಂತದಲ್ಲಿದ್ದಾರೆ ಎನ್ನುವುದು ತಿಳಿದು ಬಂದಿದೆ..
ಇನ್ನು ಇತ್ತೀಚೆಗೆ ರಾಜರಾಜೇಶ್ವರಿ ನಗರದಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದ್ದು.. ಕಲ್ಲು ಕ್ವಾರಿಯಲ್ಲಿ ಶೂಟಿಂಗ್ ಮಾಡುತ್ತಿದ್ದಾಗ ನಟ ಮಂಡ್ಯ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ.. ಇದರಿಂದಾಗಿ ಅವರ ಕಾಲಿಗೆ ಚಿಕಿತ್ಸೆ ಕೊಡಲಾಗಿದೆ ಎಂದು ವರದಿಯಾಗಿದೆ.