ಶ್ರೀ ಸುಜ್ಞಾನೇಂದ್ರ ತೀರ್ಥರ ಆರಾಧನೆ: ವೃಂದಾವನಕ್ಕೆ ವಿಶೇಷ ಪೂಜೆ

ಉಡುಪಿ: ಆಷಾಢ ಕೃಷ್ಣ ಪಕ್ಷದ ದ್ವಾದಶಿಯಂದು ಶ್ರೀಕೃಷ್ಣ ಮಠದಲ್ಲಿ ಶ್ರೀ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ ಭಕ್ತಿಪೂರ್ವಕವಾಗಿ ನಡೆಯಿತು.

ಆರಾಧನೆಯ ಪ್ರಯುಕ್ತ ಕೃಷ್ಣ ಮಠದ ಸಮುಚ್ಚಯದಲ್ಲಿರುವ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ವೃಂದಾವನಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗೋ ಪೂಜೆಯನ್ನು ನೆರವೇರಿಸಿದರು.

ನಂತರ ನಡೆದ ಕಾರ್ಯಕ್ರಮದಲ್ಲಿ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಆರಾಧನಾ ಕಾರ್ಯಕ್ರಮದಲ್ಲಿ ಭಕ್ತರು ಹಾಗೂ ಮಠದ ಸಿಬ್ಬಂದಿ ಉಪಸ್ಥಿತರಿದ್ದರು.