ಉಡುಪಿ, ಜೂನ್ 14: 2019-20 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಡಿ.ಎಡ್, ಬಿ.ಎಡ್ ಮತ್ತು ಎಲ್.ಎಲ್.ಬಿ ಮೊದಲಾದ ತಾಂತ್ರಿಕ ಮತ್ತು ವೃತ್ತಿಪರ ವಿಷಯಗಳಲ್ಲಿ ಪ್ರವಾಸವು ಕಡ್ಡಾಯವಾಗಿದ್ದರೆ ಅಂತಹ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು 1000 ರೂ. ಸಹಾಯಧನವನ್ನು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ನೀಡಲಾಗುವುದು. ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿ 18000 ರೂ. ಒಳಗಿರಬೇಕು.
ಅರ್ಹ ಫಲಾನುಭವಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿಮಾಡಿ, ಜಾತಿ ದೃಢೀಕರಣ ಪತ್ರ ಹಾಗೂ ಪ್ರವಾಸಕ್ಕೆ ತಗುಲಿದ ಖರ್ಚು ವೆಚ್ಚಗಳ ವಿವರವನ್ನು ಶಾಲಾ ಪ್ರಾಂಶುಪಾಲರಿಂದ ದೃಢೀಕರಿಸಿ, ಉಡುಪಿ ಸಮಗ್ರ ಗಿರಿಜನ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.