ಚೆನ್ನೈ (ತಮಿಳುನಾಡು): ವಿಶ್ವಕಪ್ ಟೂರ್ನಿಯ 16ನೇ ಪಂದ್ಯ ಇದಾಗಿದ್ದು ಚೆನ್ನೈನ ಎಂಎ ಚಿದಂಬರಂ ಮೈದಾನದ ಆತಿಥ್ಯ ವಹಿಸಿಕೊಂಡಿದೆ. ಏಕದಿನ ವಿಶ್ವಕಪ್ ಪಂದ್ಯಾವಳಿಗಳ ಭಾಗವಾಗಿ ಇಂದು ನ್ಯೂಜಿಲ್ಯಾಂಡ್ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ.
ಈ ಆವೃತ್ತಿಯಲ್ಲಿ ನ್ಯೂಜಿಲ್ಯಾಂಡ್ ಆಡಿರುವ ಮೂರು ಪಂದ್ಯಗಳನ್ನು ವಶಕ್ಕೆ ಪಡೆದುಕೊಂಡರೆ, ಅಫ್ಘಾನಿಸ್ತಾನ ಒಂದು ಪಂದ್ಯವನ್ನು ಗೆದ್ದು ಎರಡು ಪಂದ್ಯಗಳನ್ನು ಕೈಚೆಲ್ಲಿದೆ. ಭಾನುವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ಗೆ ಸೋಲಿನ ರುಚಿ ತೋರಿಸಿರುವ ಅಫ್ಘಾನಿಸ್ತಾನ, ಇದೀಗ ಕಿವೀಸ್ ಮೇಲೆ ಕಣ್ಣಿಟ್ಟಿದೆ. ಕಿವೀಸ್ ಕೂಡ ಪೂರ್ವ ಸಿದ್ಧತೆಯಿಂದಲೇ ಕಣಕ್ಕಿಳಿದಿದೆ. ಚೆನ್ನೈನಲ್ಲಿ ಮಧ್ಯಾಹ್ನದ ವೇಳೆ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಮಳೆಯ ಸಾಧ್ಯತೆ ತೀರಾ ಕಡಿಮೆ ಇದೆ.ಟಾಸ್ ಗೆದ್ದ ಅಫ್ಘಾನ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ನ್ಯೂಜಿಲ್ಯಾಂಡ್ ತಂಡಕ್ಕೆ ಕ್ಷೇತ್ರರಕ್ಷಣೆಯ ಹೊಣೆ ನೀಡಿದೆ. ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಆಘಾತಕಾರಿ ಸೋಲುಣಿಸಿ ಅಚ್ಚರಿ ಮೂಡಿಸಿರುವ ಅಫ್ಘಾನಿಸ್ತಾನ, ಇದೀಗ ಹಾಲಿ ರನ್ನರ್‌ಅಪ್ ನ್ಯೂಜಿಲ್ಯಾಂಡ್ ತಂಡವನ್ನು ಕೂಡ ಹೊಡೆದುರುಳಿಸುವ ಉತ್ಸಾಹದಲ್ಲಿದೆ.
ಇನ್ನಿಂಗ್ ಆಯ್ಕೆಯಲ್ಲಿ ಗೊಂದಲದಲ್ಲಿದ್ದೆವು. ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ನೀಡಿದ್ದು ಉತ್ತಮ. ದೊಡ್ಡ ಮೊತ್ತ ಗಳಿಸುವ ನಿರೀಕ್ಷೆ ಇದೆ. ವಿಲಿಯಮ್ಸನ್ ಮತ್ತೆ ಹೊರಗುಳಿದಿದ್ದಾರೆ. ತಂಡದ ಉಳಿದ ಆಟಗಾರರೆಲ್ಲ ಫಿಟ್ ಇದ್ದು ಗೆಲುವು ನಮ್ಮದೆ. ಟಾಮ್ ಲ್ಯಾಥಮ್, ನ್ಯೂಜಿಲ್ಯಾಂಡ್ ತಂಡದ ನಾಯಕ
ಎರಡನೆಯ ಇನ್ನಿಂಗ್ನಲ್ಲಿ ಇಬ್ಬನಿ ಆವರಿಸಿಕೊಳ್ಳುವ ಸಧ್ಯತೆ ಇದೆ. ಹಾಗಾಗಿ ನಾವು ಮೊದಲು ಬೌಲಿಂಗ್ ಮಾಡಲು ಬಯಸುತ್ತೇವೆ. ಎದುರಾಳಿ ತಂಡವನ್ನು ಸಾಧ್ಯವಾದಷ್ಟು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವ ಪ್ರಯತ್ನ ಮಾಡುತ್ತೇವೆ. ಇಂದಿನ ಪಂದ್ಯವನ್ನು ಗೆಲ್ಲುವುದು ನಮ್ಮ ಗುರಿ. – ಹಶ್ಮತುಲ್ಲಾ ಶಾಹಿದಿ, ಅಫ್ಘಾನಿಸ್ತಾನ ತಂಡದ ನಾಯಕ
ಆಡುವ 11ರ ಬಳಗ: ಅಫ್ಘಾನಿಸ್ತಾನ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ(ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್(ವಿಕೆಟ್ ಕೀಪರ್), ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಾ.
ನ್ಯೂಜಿಲ್ಯಾಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್/ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.ಮತ್ತೊಂದೆಡೆ ಈ ಆವೃತ್ತಿಯಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಮುನ್ನಡೆಯುತ್ತಿರುವ ಕಿವೀಸ್ ಕೂಡ ಆಫ್ಘನ್ನರನ್ನು ಸುಲಭವಾಗಿ ಬಗ್ಗುಬಡಿಯುವ ತವಕ್ಕದಲ್ಲಿದೆ. ಕ್ರಿಕೆಟ್ ಅಭಿಮಾನಿಗಳು ಇಂದು ಮತ್ತೊಂದು ಅಚ್ಚರಿ ಫಲಿತಾಂಶ ಹೊರಬೀಳಬಹುದು ಎಂಬ ನಿರೀಕ್ಷೆ ಹೊತ್ತು ಕುಳಿತಿದ್ದಾರೆ. ಹಾಗಾಗಿ ಇಂದಿನ ಪಂದ್ಯ ಕುತೂಹಲ ಮೂಡಿಸಿದೆ.