udupixpress
Home Trending ಉಡುಪಿ ಶ್ರೀ ಕೃಷ್ಣಮಠದಲ್ಲಿ 15 ದಿನಗಳ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ

ಉಡುಪಿ ಶ್ರೀ ಕೃಷ್ಣಮಠದಲ್ಲಿ 15 ದಿನಗಳ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ

ಉಡುಪಿ: ಈಗಾಗಲೇ ರಾಜ್ಯದ ಇತರೆ ದೇವಾಲಯಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದ್ದರೂ, ಉಡುಪಿ ಶ್ರೀ ಕೃಷ್ಣಮಠದಲ್ಲಿ 10-15 ದಿನಗಳ ನಂತರ ಕೊರೊನಾ ಪರಿಣಾಮ ಗಮನಿಸಿ, ಇತರ ಮಠಾಧೀಶರ ಸಲಹೆ-ಸೂಚನೆಗಳನ್ನು ಅನುಸರಿಸಿ ಮುಕ್ತವಾಗಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಶ್ರೀ ಕೃಷ್ಣಭಕ್ತರಿಗೆ ಹೊರಗಿನಿಂದಲೇ ದರ್ಶನ ವ್ಯವಸ್ಥೆ:

ಕೊರೊನಾ ಸೋಂಕು ಹಿನ್ನಲೆ ದೇಶಾದ್ಯಂತ ಲಾಕ್ ಡೌನ್ ಜಾರಿಗೊಲಿಸಿದ್ದು, ಭಕ್ತರಿಗೆ ಮಠದ ಒಳಗೆ ಪ್ರವೇಶ ನೀಡಲಾಗಲ್ಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಜಿಲ್ಲಾಡಳಿತದ ಆದೇಶವನ್ನು ಪಾಲಿಸಿಕೊಂಡು ಬರಲಾಗಿದ್ದು, ಕೃಷ್ಣಭಕ್ತರಿಗೆ ಹೊರಗಿನಿಂದಲೇ ದರ್ಶನ ವ್ಯವಸ್ಥೆಮಾಡಲಾಗಿದೆ, ಇದಕ್ಕೆ ಭಕ್ತರೂ ಸಹ ಸಹಕಾರ ನೀಡಿದ್ದಾರೆ. ಮಠದ ಒಳಗೆ ಅಗತ್ಯದ ಸೇವಾ-ಪರಿಚಾರಕರು ಮಾತ್ರ ಇದ್ದು, ದೇವರ ಪೂಜೆ ಸಂಪ್ರದಾಯ ಬದ್ಧವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಕೃಷ್ಣಮಠದಲ್ಲಿ ಅಷ್ಠಮಠದ ಯತಿಗಳೇ ಪೂಜೆ ಮಾಡುವ ಕ್ರಮವಿದ್ದು, ಹಾಗಾಗಿ ಒಳಗಿನವರಿಗೆ ಏನಾದರೂ ತೊಂದರೆಯಾದರೆ ಅನುಚಾನ ಪದ್ಧತಿಗೆ ಭಂಗ ಬರುವ ಸಂದರ್ಭಗಳು ಇರುತ್ತವೆ. ಹಾಗಾಗಿ, 10–15ದಿನಗಳ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು. ಭಕ್ತರ ಆರೋಗ್ಯದ ದೃಷ್ಟಿಯಿಂದಲೂ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

error: Content is protected !!