ಬೆಂಗಳೂರು: ಹೋಟೆಲ್ಗಳಲ್ಲಿನ ಆಹಾರ ಗುಣಮಟ್ಟದ ಪರಿಶೀಲನೆ ಬಳಿಕ ಇದೀಗ ರಾಜ್ಯದ ಹಾಸ್ಟೆಲ್ಗಳು ಮತ್ತು ಪಿಜಿಗಳಲ್ಲೂ ಆಹಾರ ತಪಾಸಣೆ ನಡೆಸಲು ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.
ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಸರ್ಕಾರಿ, ಖಾಸಗಿ ಹಾಗೂ ಸಹಕಾರಿ ಹಾಸ್ಟೆಲ್ಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಮತ್ತು ಆಹಾರ ಪದಾರ್ಥಗಳ ಸಂಗ್ರಹಣೆ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಹಾಸ್ಟೆಲ್ಗಳ ಜೊತೆಗೆ ಪಿಜಿಗಳು ಹಾಗೂ ಕ್ಯಾಂಟೀನ್ಗಳಲ್ಲಿಯೂ ಆಹಾರ ಪರೀಕ್ಷೆ ನಡೆಸಲಾಗುವುದು. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಅಧಿಕಾರಿಗಳು ಎಚ್ಚೆತ್ತುಕೊಂಡು ತಪಾಸಣೆ ನಡೆಸಬೇಕು ಎಂದು ಸಚಿವರು ಸೂಚಿಸಿದ್ದಾರೆ.
ಜನರಿಗೆ ಹಣಕ್ಕೆ ತಕ್ಕಂತೆ ಗುಣಮಟ್ಟದ ಆಹಾರ ನೀಡಬೇಕು. ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ.
ಹೋಟೆಲ್ಗಳು, ಹಾಸ್ಟೆಲ್ಗಳು, ಪಿಜಿಗಳು ಹಾಗೂ ಕ್ಯಾಂಟೀನ್ಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ತಪಾಸಣಾ ಕಾರ್ಯ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.















