ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಮತ್ತು ಬಿಪ್ರಾಕ್ಟಿಕಲ್ ಸಂಸ್ಥೆಯ ನಡುವೆ ಒಡಂಬಡಿಕೆ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವು ಭವಿಷ್ಯದ ಇಂಜಿನಿಯರ್‍ಗಳನ್ನು ರೂಪಿಸುವ ನಿಟ್ಟಿನಲ್ಲಿ ದಿನಾಂಕ 30 ಜುಲೈ 2025 ರಂದು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ ತರಬೇತಿಯಲ್ಲಿ ಮುಂಚೂಣಿಯಲ್ಲಿರುವ ಬಿಪ್ರಾಕ್ಟಿಕಲ್ ಸಂಸ್ಥೆಯ ಜೊತೆ ಒಡಂಬಡಿಕೆಗೆ ಸಹಿ ಹಾಕಿತು.

ಈ ಒಡಂಬಡಿಕೆಯಲ್ಲಿ ಶ್ರೀ ಸೋದೆ ವಾದಿರಾಜ ಮಠ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಪ್ರೊ. ಡಾ. ರಾಧಕೃಷ್ಣ ಎಸ್ ಐತಾಳ್, ಡೀನ್‍ಗಳು, ವಿಭಾಗದ ಮುಖ್ಯಸ್ಥರು, ಪ್ಲೇಸ್ಮೆಂಟ್ ಅಧಿಕಾರಿಗಳು ಹಾಗೂ ಬಿಪ್ರಾಕ್ಟಿಕಲ್‍ನ ನಿರ್ದೇಶಕರಾದ ಹರೀಶ್ ಕುಮಾರ್ ಮತ್ತು ಅಸೋಸಿಯೇಟ್ ಮ್ಯಾನೇಜರ್ ಆದರ್ಶ ಉಪಸ್ಥಿತರಿದ್ದರು.

ಈ ಒಡಂಬಡಿಕೆಯ ಮುಖ್ಯ ಉದ್ದೇಶ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ, ಉದ್ಯೋಗ ಕೌಶಲ್ಯಗಳು, ಡಿಜಿಟಲ್ ಕಲಿಕಾ ವೇದಿಕೆಯನ್ನು ಒದಗಿಸುವುದಾಗಿದೆ.
ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಪ್ರೊ. ಡಾ. ರಾಧಕೃಷ್ಣ ಎಸ್ ಐತಾಳ್ ಇವರು ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಧಿಸುವ ಉದ್ದೇಶವನ್ನು ಗಮನದಲ್ಲಿ ಇಟ್ಟುಕೊಂಡು ಎರಡು ಸಂಸ್ಥೆಗಳು ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು.