ಕೊಡವೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಉಡುಪಿ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಆತ್ಮ ಅನುಷ್ಠಾನ ಸಮಿತಿ ಇವರ ಸಂಯುಕ್ತ ಆಶ್ರಯದೊಂದಿಗೆ ಅಂಬಾಗಿಲು ವಲಯದ ಶಿವಾಜಿ ಪಾರ್ಕ್ ಗರ್ಡೆ ಲಕ್ಷ್ಮೀನಗರದಲ್ಲಿ ಕೃಷಿ ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಹಿರಿಯ ನಿರ್ದೇಶಕರ ಶಿವರಾಯ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿ ಪಾರ್ಕ್ ನಿರ್ವಹಣ ಸಮಿತಿ ಅಧ್ಯಕ್ಷ ಮೋಹನ್ ಸುವರ್ಣ ಇವರು ವಹಿಸಿದ್ದರು. ನಗರಸಭಾ ಸದಸ್ಯ ವಿಜಯ ಕೊಡವೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್ ಭಾಗವಹಿಸಿದ್ದರು.
ನಿವೃತ್ತ ಶಿಕ್ಷಕಿ ಮತ್ತು ಪ್ರಗತಿಪರ ಕೃಷಿಕೆ ಶ್ರೀಮತಿ ಶರಾವತಿ, ಅಂಬಾಗಿಲು ವಲಯದ ನಿಕಟ ಪೂರ್ವ ಅಧ್ಯಕ್ಷೆ ಶಿಲಾ ನಾಯಕ್, ಲಕ್ಷ್ಮಿನಗರ ಒಕ್ಕೂಟದ ಅಧ್ಯಕ್ಷೆ ಸುಲೋಚನ, ಉಡುಪಿ ತಾಲೂಕು ಕೃಷಿ ಅಧಿಕಾರಿ ಎಂ ರಾಘವೇಂದ್ರ, ಅಂಬಾಗಿಲು ವಲಯದ ಮೇಲ್ವಿಚಾರಕಿ ಪವಿತ್ರ, ಸೇವಾ ಪ್ರತಿನಿಧಿ ರಾಧಾ ಭಾಸ್ಕರ್ ಮತ್ತುಅಮಿತ್ ಹಾಗೂ ಒಕ್ಕೂಟದ ಪದಾಧಿಕಾರಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.