ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟಿಯ ಮೂಲಕ ವಾಹನ ಸಂಚಾರವನ್ನು ಮಾರ್ಚ್ 19 ರಿಂದ 30 ದಿನಗಳ ವರೆಗೆ ನಿಷೇಧಿಸಿ ಮಾರ್ಚ್ 7 ರಂದು ಆದೇಶ ಹೊರಡಿಸಲಾಗಿದ್ದು, ಆದರೆ ಕಾರ್ಕಳ, ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ರಕ್ಷಣಾ ತಡೆಗೋಡೆಗಳ ಮರು ನಿರ್ಮಾಣ ಹಾಗೂ ದುರಸ್ಥಿ ಕಾರ್ಯ ಆರಂಭಿಸಲು ಅರಣ್ಯ ಇಲಾಖೆಯ ಮೇಲಾಧಿಕಾರಿಗಳಿಂದ ಸೂಕ್ತ ನಿರ್ದೇಶನದ ಅನುಮತಿ ಪಡೆಯುವುದಾಗಿ ತಿಳಿಸಿರುವುದರಿಂದ ಅನುಮತಿ ದೊರಕುವವರೆಗೂ ಸದ್ರಿ ರಸ್ತೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮುಂದಿನ ಆದೇಶದ ವರೆಗೂ ವಾಹನ ಸಂಚಾರಕ್ಕೆ ಮುಕ್ತಗೊಳಿಸಿ ಆದೇಶ ಹೊರಡಿಸಿರುತ್ತಾರೆ.