ಉಡುಪಿ : ರಾಷ್ಟ್ರಿಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿAದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮ 1989 ಕಲಂ 221(ಎ)(2) & (5) ರನ್ವಯ ರಾಷ್ಟ್ರಿಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15 ರ ವರೆಗೆ 12 ಟನ್ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.
ಬದಲಿ ಮಾರ್ಗದ ವಿವರ: ಉಡುಪಿ – ಸಿದ್ದಾಪುರ – ಹೊಸಂಗಡಿ – ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸಂಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.