ವಾಯುಪಡೆಯ ಹೆಲಿಕಾಪ್ಟರ್ ಪತನ: ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 13 ಮಂದಿ ಮೃತ್ಯು

ಚೆನ್ನೈ: ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ ಕೂನೂರು ಬಳಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡಿದ್ದು, ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್, ಮಧುಲಿಕಾ ರಾವತ್ ಮತ್ತು ವಿಮಾನದಲ್ಲಿದ್ದ ಸೇರಿ 13 ಜನರು ಸಾವನ್ನಪ್ಪಿದ್ದಾರೆ.

ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್), ಜನರಲ್ ಬಿಪಿನ್ ರಾವತ್  ಅವರು ಇಂದು ಸ್ಟಾಫ್ ಕೋರ್ಸ್‌ನ ಅಧ್ಯಾಪಕರು ಮತ್ತು ವಿದ್ಯಾರ್ಥಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲು ತಮಿಳುನಾಡಿನ ನೀಲಗಿರಿ ಹಿಲ್ಸ್​​ನ ವೆಲ್ಲಿಂಗ್ಟನ್ ನಲ್ಲಿರೋ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ಭೇಟಿ ನೀಡಲು ಹೆಲಿಕಾಪ್ಟರ್​​ನಲ್ಲಿ ತೆರಳಿದ್ದರು. ವೇಳೆ ದುರಂತ ಸಂಭವಿಸಿತ್ತು.

ಇನ್ನು ಘಟನೆಯಲ್ಲಿ ಗಾಯಗೊಂಡಿರುವ ಜಿಪಿ ಕ್ಯಾಪ್ಟನ್ ವರುಣ್ ಸಿಂಗ್ ಅವರು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.