ವಿಚ್ಛೇದನಕ್ಕೆ ಮುಂದಾದ ಸ್ಯಾಂಡಲ್ ವುಡ್ ಖ್ಯಾತ ನಟ ಅಜಯ್ ರಾವ್ ! ನಟನ ವಿರುದ್ದ ಪತ್ನಿಯೇ ದೂರು ನೀಡಿದ್ರಾ?

ಬೆಂಗಳೂರು: ಸ್ಯಾಂಡಲ್ ವುಡ್ ನಟ ಎಕ್ಸ್‌ಕ್ಯೂಸ್ ಮಿ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ದಂಪತಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ.

ಅಜಯ್ ರಾವ್ ಇತ್ತೀಚೆಗಷ್ಟೇ ಯುದ್ಧಕಾಂಡ 2 ಸಿನಿಮಾ ನಿರ್ಮಿಸಿ, ನಟಿಸಿದ್ದರು. ಅಲ್ಲದೇ ಅಜಯ್ ರಾವ್ ಅವರಿಗೆ ಸಾಕಷ್ಟು ಸಾಲವಿದ್ದು, ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಇದಕ್ಕೆ ಹೇಳಿಕೆ ನೀಡಿದ್ದ ನಟ, ಅದೆಲ್ಲ ಸುಳ್ಳು ಎಂದಿದ್ದರು. ಆದರೆ ಈಗ ಮತ್ತೆ ವಿಚ್ಛೇದನದ ಸುದ್ದಿ ಕೇಳಿ ಬಂದಿದೆ.

ಅಜಯ್ ರಾವ್ ಹಾಗೂ ಸ್ವಪ್ನಾ ಪ್ರೀತಿಸಿ ಮದುವೆಯಾಗಿದ್ದರು. 2014ರಲ್ಲಿ ಹೊಸೇಪಟೆಯಲ್ಲಿ ಅವರ ವಿವಾಹ ನಡೆದಿತ್ತು. ದಂಪತಿಗೆ ಓರ್ವ ಮಗಳಿದ್ದು, 11 ವರ್ಷಗಳ ದಾಂಪತ್ಯ ಜೀವನಕ್ಕೆ ಇದೀಗ ಅಂತ್ಯ ಹಾಡುವುದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಸದ್ಯಕ್ಕೆ ವಿಚ್ಛೇದನಕ್ಕೆ ಕಾರಣ ಏನೆಂಬುದು ತಿಳಿದು ಬಂದಿಲ್ಲ.

ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದು, ಮಗಳು ಕೂಡ ಅಜಯ್ ರಾವ್ ವಿರುದ್ಧ ದೂರು ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.