ಅಜೆಕಾರು: ಸರಕು ಸಾಗಾಣಿಕೆಯ ಲಾರಿಯೊಂದು ತಿರುವಿನಲ್ಲಿ ಉರುಳಿ ಬಿದ್ದ ಪರಿಣಾಮ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಕೈಕಂಬ ಸಮೀಪದ ಮಾರಿಗುಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಲಾರಿ ಹುಬ್ಬಳ್ಳಿಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದು, ಈ ವೇಳೆ ಅಜೆಕಾರು ಕೈಕಂಬದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.
ಇದರ ಪರಿಣಾಮ ಚಾಲಕನಿಗೆ ಗಂಭೀರ ಗಾಯವಾಗಿದ್ದು, ನಿರ್ವಾಹಕ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.