ಉಡುಪಿ: ಶ್ರೀಕೃಷ್ಣಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಪರವಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಅಶೋಕ ಹಾರನಹಳ್ಳಿಯವರನ್ನು ಶಾಲು ಹೊದಿಸಿ ಹಾರದೊಂದಿಗೆ ಪೇಟ ತೊಡಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಗೌರವ ಅಧ್ಯಕ್ಷ ಕೃಷ್ಣಾನಂದ ಚಾತ್ರ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್, ಮಹಾಸಭಾ ಕಾರ್ಯಕಾರಿ ಸಮಿತಿ ಸದಸ್ಯರಾದ ಉಮೇಶ ಶಾಸ್ತ್ರಿ, ಪೊಳಲಿ ಗಿರಿಪ್ರಕಾಶ ತಂತ್ರಿ, ಜಯಸಿಂಹ ಶತ್ರುಘ್ನ ಮತ್ತು ರವಿಕುಮಾರ್, ಹಿರಿಯ ವಕೀಲ ಪ್ರದೀಪ ಕುಮಾರ್, ಪರ್ಯಾಯ ಮಠದ ದಿವಾನ ಕೆ. ವರದರಾಜ ಭಟ್, ಪರ್ಯಾಯ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ, ಉಡುಪಿ ತಾಲೂಕು ಬ್ರಾಹ್ಮಣ ಸಭಾ ಅಧ್ಯಕ್ಷ ಮಂಜುನಾಥ ಉಪಾಧ್ಯ, ಕಾರ್ಯದರ್ಶಿ ಸಂದೀಪ ಕುಮಾರ್ ಮಂಜ, ಶ್ರೀಕಾಂತ ಉಪಾಧ್ಯಾಯ ಮೊದಲಾದವರು ಉಪಸ್ಥಿತರಿದ್ದರು.