ಬೆಂಗಳೂರು: ಅಖಿಲ ಭಾರತೀಯ ಕಲಾಸಾಧಕ ಸಂಗಮ ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರು: ಸಂಸ್ಕಾರ ಭಾರತಿ ವತಿಯಿಂದ ಆರ್ಟ್ ಆಫ್ ಲಿವಿಂಗ್ ಆವರಣದಲ್ಲಿ ಫೆಬ್ರವರಿ 1 ರಿಂದ 4 ವರೆಗೆ‌ ಆಯೋಜಿಸಲಾಗಿರುವ ಅಖಿಲ ಭಾರತೀಯ ಕಲಾಸಾಧಕ ಸಂಗಮ ಕಾರ್ಯಕ್ರಮ ಗುರುವಾರ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ವಿಜಯನಗರ ರಾಜವಂಶಸ್ಥ ಕೃಷ್ಣದೇವರಾಯ, ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿ, ಕಲಾವಿದ ರವೀಂದ್ರ ಯಾವಗಲ್, ಸಂಸ್ಕಾರ ಭಾರತಿಯ ಅಖಿಲ ಭಾರತೀಯ ಅಧ್ಯಕ್ಷ ವಾಸುದೇವ ಕಾಮತ್, ಉಪಾಧ್ಯಕ್ಷ ಮೈಸೂರು ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಅಶ್ವಿನ್ ದಳ್ವಿ, ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷ ಸುಚೇಂದ್ರ ಪ್ರಸಾದ್ ಉಪಸ್ಥಿತರಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ ಮುಕುಂದ ಸಿ.ಆರ್ ಸೇರಿದಂತೆ ಅನೇಕ ಗಣ್ಯರು ಹಾಗೂ ರಾಷ್ಟ್ರಾದಾದ್ಯಂತದಿಂದ ಆಗಮಿಸಿದ 2500 ಕ್ಕೂ ಮಂದಿ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.