ಮಣಿಪಾಲ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿಗಳ ವಿಭಾಗಗಳು ಏಪ್ರಿಲ್ 27ರಿಂದ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸೇವೆಗೆ ಮುಕ್ತವಾಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ.
ಸಾರ್ವಜನಿಕರು ಮತ್ತು ರೋಗಿಗಳು ಈ ಸೇವಾ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಈ ಸೇವೆಯನ್ನು ಪಡೆದುಕೊಳ್ಳಲು ಬರುವ ಪ್ರತಿಯೊಂದು ರೋಗಿಯು ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು. ನಂತರ ಸಂಬಂಧ ಪಟ್ಟ ವಿಭಾಗಗಳಿಗೆ ಕಳುಹಿಸಿಕೊಡಲಾಗುವುದು ಎಂದು ಹೇಳಿದ್ದಾರೆ.
ಎಲ್ಲಾ ರೋಗಿಗಳು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಖಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು ಮತ್ತು ಪ್ರತೀ ರೋಗಿಗಳೊಂದಿಗೆ ಒಬ್ಬ ಸಹಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಹಾಗೆಯೇ ಟೆಲಿಮೆಡಿಸಿನ್ ಮೂಲಕ ವೈದ್ಯರ ಸಮಾಲೋಚನಾ ಸೇವೆಯು ಬೆಳಿಗ್ಗೆ 9ರಿಂದ ಮಧ್ಯಾಹ್ನ 4ರ ವರೆಗೆ ಲಭ್ಯವಿದೆ. ಸಾರ್ವಜನಿಕರು 080-47192235 ಗೆ ಕರೆಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.