ರಾಜ್ಯದಲ್ಲಿ ಇಂದಿನಿಂದ ಎಲ್ಲಾ ರಿಜಿಸ್ಟ್ರಾರ್ ಕಚೇರಿಗಳು ಓಪನ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಇಂದಿನಿಂದ ರಾಜ್ಯದ ಎಲ್ಲಾ ರಿಜಿಸ್ಟ್ರಾರ್ (ಉಪನೋಂದಾವಣಾಧಿಕಾರಿಗಳ) ಕಚೇರಿಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಕೊರೊನಾ ನಿಯಮಗಳನ್ನ ಪಾಲಿಸಿ ಜಿಲ್ಲಾ ರಿಜಿಸ್ಟ್ರಾರ್​ ಕಚೇರಿಗಳು ಹಾಗೂ ಸಬ್​ ರಿಜಿಸ್ಟ್ರಾರ್​ ಕಚೇರಿಗಳು ಕಾರ್ಯನಿರ್ವಹಿಸಲು ಸಮ್ಮತಿ ಸೂಚಿಸಲಾಗಿದೆ.