ಕಡಬ: ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಕಡಬ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅವಿಭಜಿತ ದ.ಕ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೂ ಸೋಮವಾರದಂದು ರಜೆ ಘೋಷಣೆ ಮಾಡಲಾಗಿದೆ.

ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಕಡಬ ತಹಸೀಲ್ದಾರ್ ಅವರು ರಜೆ ಘೋಷಣೆ ಮಾಡಿದ್ದಾರೆ.