ಉಡುಪಿ, ಜುಲೈ 22: 2019-20 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ )ಸಮುದಾಯದ ವಿದ್ಯಾರ್ಥಿಗಳಿಗೆ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಆಫ್ಲೈನ್ ಅರ್ಜಿಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://gokdom.kar.nic.in ಅಥವಾ https://dom.karnataka.gov.in/udupi ರಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಸೂಚಿಸಲಾದ ಎಲ್ಲಾ ದಾಖಲಾತಿಗಳೊಂದಿಗೆ ಆಗಸ್ಟ್ 31 ರ ಒಳಗೆ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574881 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.