ಉಡುಪಿ, ಮೇ 15: ಉಡುಪಿ ತಾಲ್ಲೂಕು ಮಣಿಪಾಲದಲ್ಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನಿಲಯದಲ್ಲಿ ಒಟ್ಟು 50 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಶೇ.75% ಅಲ್ಪಸಂಖ್ಯಾತ ಮತ್ತು ಶೇ.25% ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ.
ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರಬೇಕು. ವಿದ್ಯಾರ್ಥಿಯು ಅರ್ಜಿ ನಮೂನೆಯ ಜೊತೆಗೆ ವಿದ್ಯಾರ್ಥಿಯ ಜಾತಿ /ಆದಾಯ ಪ್ರಮಾಣ ಪತ್ರ, 2018-19 ನೇ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ನಿಲಯಕ್ಕೆ ಇರುವ ದೂರದ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಪಡೆದ ದೂರದ ಪ್ರಮಾಣ ಪತ್ರ, ಎರಡು ಫೋಟೊಗಳೊಂದಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574596 ಅಥವಾ 0820-2574881 ಸಂಪರ್ಕಿಸುವಂತೆ ಹಾಗೂ ಅರ್ಜಿಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿ, ಉಡುಪಿ ದೂ.ಸಂಖ್ಯೆ: 0820-2520739, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ರಜತಾದ್ರಿ, ಮಣಿಪಾಲ, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಾರ್ಕಳ ದೂ.ಸಂಖ್ಯೆ: 08258-231101, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕುಂದಾಪುರ ದೂ.ಸಂಖ್ಯೆ: 08254-230370 ಇವರಿಗೆ ಸಲ್ಲಿಸುವಂತೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.