ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ-2023ʼ ಅಕ್ಟೋಬರ್ 6 ಹಾಗೂ 7ರಂದು ಮೂಡುಬಿದಿರೆಯ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ನಡೆಯಲಿದೆ. ಆಳ್ವಾಸ್ ಪ್ರತಿಷ್ಠಾನವು 2007 ರಿಂದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ ಯನ್ನು ನಡೆಸಿಕೊಂಡು ಬರುತ್ತಿದೆ. ಇದು ಆಳ್ವಾಸ್ ಪ್ರಗತಿಯ 13ನೇ ಆವೃತ್ತಿಯಾಗಿದ್ದು, ಒಟ್ಟಾರೆಯಾಗಿ 200 ಕ್ಕೂ ಅಧಿಕ ಉದ್ಯೋಗದಾತ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಅರ್ಹತೆ:
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ, ಅರೆ ವೈದ್ಯಕೀಯ, ಇಂಜಿನಿಯರಿಂಗ್, ಕಲಾ, ವಾಣಿಜ್ಯ, ವಿಜ್ಞಾನ, ನರ್ಸಿಂಗ್, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ನೋಂದಣಿ:
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪೆನಿಗಳ ವಿವರ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್‌ಸೈಟ್ www.alvaspragati.com ನಲ್ಲಿ ವೀಕ್ಷಿಸಬಹುದು. ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು-http://www.alvaspragati.com/candidateRegistrationPage#top -ನಲ್ಲಿ ಕಡ್ಡಾಯವಾಗಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ನೋಂದಣಿ ಸಂಪೂರ್ಣ ಉಚಿತ. ಮೇಳದಲ್ಲಿ ಭಾಗವಹಿಸಲು ಬರುವ ಅಭ್ಯರ್ಥಿಗಳು 5 ರಿಂದ 10 ಪಾಸ್‌ಪೋರ್ಟ್ ಭಾವಚಿತ್ರಗಳು, ಅಂಕಪಟ್ಟಿಗಳು (ಛಾಯಾಪ್ರತಿಗಳು), ಆನ್‌ಲೈನ್ ನೋಂದಣಿಯ ನಂಬರ್ ಹಾಗೂ ಐಡಿಯನ್ನು ಹೊಂದಿರಬೇಕು. ಹೊರ ಜಿಲ್ಲೆಯಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ: ಶ್ರಮಿಕ ಶಾಸಕರ ಕಾರ್ಯಾಲಯ ಬೆಳ್ತಂಗಡಿ ಇಲ್ಲಿ ಸಂಪರ್ಕಿಸಬಹುದು.
ದೂರವಾಣಿ: 9901212207
ಅಥವಾ ಆಳ್ವಾಸ್ ಕಾರ್ಯಾಲಯ: 9008907716, 9663190590, 7975223865 ಇಲ್ಲಿ ಸಂಪರ್ಕಿಸಬಹುದು.