ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಐಪಿಎಸ್ ಅಧಿಕಾರಿ ಅಮಾತೆ ವಿಕ್ರಮ್ ಅವರನ್ನು ಎಸ್ಪಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು, ಇಲ್ಲಿಗೆ ಗುಪ್ತಚರ ವಿಭಾಗದಲ್ಲಿದ್ದ ಅಮಾತೆ ವಿಕ್ರಮ್ ಅವರನ್ನು ನೇಮಕ ಮಾಡಲಾಗಿದೆ.
ಅಮಾತೆ ವಿಕ್ರಮ್ ಮೈಸೂರು, ಬೆಳಗಾವಿ, ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ ಮೈಸೂರಿನಲ್ಲಿ ನಡೆದ ಕಳ್ಳತನ ಪ್ರಕರಣವೊಂದನ್ನು ಬೇಧಿಸಿ ಡಕಾಯಿತರನ್ನು ಬಂಧಿಸಿದ್ದರು. ಇವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅವಧಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.