ಅಂಬಲಪಾಡಿ- ಯೋಗ ದಿನಾಚರಣೆ

ಉಡುಪಿ : ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ, ಗ್ರಾಮ ಪಂಚಾಯತ್ ಅಂಬಲಪಾಡಿ ಹಾಗೂ ಮಹಿಳಾ ಮಂಡಲ ಕಿದಿಯೂರು ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಯೋಗ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

      ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

 ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ರಾಜೇಂದ್ರ ಪಿ. ಮಾತನಾಡಿ,  ಯೋಗಾಭ್ಯಾಸವನ್ನು ಕೇವಲ ಒಂದು ದಿನಕ್ಕೆ ಮೀಸಲಿರಿಸದೇ ನಿರಂತರವಾಗಿ ಮುಂದುವರಿಸಲು ಕರೆ ನೀಡಿದರು.

      ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಎಲ್ ಗೊನ್ಸಾಲ್ವಿಸ್  ಯೋಗಾಭ್ಯಾಸ ಅಗತ್ಯವಾಗಿರುವ ಕುರಿತು ಮಾಹಿತಿ ನೀಡಿದರು.

     ತಾಲೂಕು ಪಂಚಾಯತ್‍ನ ಕಾರ್ಯ ನಿರ್ವಹಣಾಧಿಕಾರಿ ಕೆ. ರಾಜು ಮಾತನಾಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಉಷಾ, ಸ್ಥಳೀಯ ಶಾಲಾ ಕಿಶೋರಿಯರು, ಗರ್ಭಿಣಿಯರು, ಗೃಹಿಣಿಯರು ಶಿಶು ಅಭಿವೃದ್ಧಿ ಯೋಜನೆ ಉಡುಪಿ ಕಛೇರಿಯ ಮೇಲ್ವಿಚಾರಕಿಯರು, ಮಹಿಳಾ ಮಂಡಲದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಪಿಡಿಒ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

 ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ (ಪ್ರಭಾರ) ವೀಣಾ ವಿವೇಕಾನಂದ ಸ್ವಾಗತಿಸಿದರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕಿ ಇಂದಿರಾ ನಾಯ್ಕ್ ವಂದಿಸಿದರು.