ಮೇ 29: ಕನ್ನರ್ಪಾಡಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟನಾ ಕಾರ್ಯಕ್ರಮ

ಉಡುಪಿ: ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಹಾಗೂ ಕಡೆಕಾರ್ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ  ಡಾ. ಬಿ.ಆರ್  ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭವು ಮೇ 29 ರಂದು ಬೆಳಗ್ಗೆ 11.30 ಕ್ಕೆ ಕನ್ನರ್ಪಾಡಿ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅಂಬೇಡ್ಕರ್ ಭವನದ ಉದ್ಘಾಟನೆ ನೆರವೇರಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಕಡೆಕಾರ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷ ನವೀನ್ ಶೆಟ್ಟಿ ಒಡ್ಡಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೋಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್ ಹಾಗೂ ಮತ್ತಿತರರು ಉಪಸ್ಥಿತರಿರಲಿದ್ದಾರೆ.