ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 4ರ (ಬುಧವಾರ) ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಸಂಬಂಧ ಈಗಾಗಲೇ ಹೈಕಮಾಂಡ್ನಿಂದ ಪಟ್ಟಿ ರವಾನೆಯಾಗಿದ್ದು, 24-30 ಶಾಸಕರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ನೂತನ ಸಚಿವರ ಅಧಿಕೃತ ಪಟ್ಟಿ ಇಂದು ರಾತ್ರಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.