ಉಡುಪಿ: ಪ್ರಸಕ್ತ ಸಾಲಿನಲ್ಲಿ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಅನುಷ್ಠಾನಗೊಳಿಸಿದ್ದು, ಈ ಕಾರ್ಯಕ್ರಮದಡಿ 1 ವರ್ಷದಿಂದ ಪದವಿಪೂರ್ವ ಕಾಲೇಜು ವರೆಗಿನ ಮಕ್ಕಳಲ್ಲಿ ರಕ್ತಹೀನತೆಯನ್ನು ಪತ್ತೆಮಾಡಿ, ಚಿಕಿತ್ಸೆ ನೀಡಿ, ಅನುಸರಣೆ ಮಾಡಲಾಗುತ್ತದೆ.
ಜಿಲ್ಲೆಯಲ್ಲಿ ನ. 23 ರಂದು ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದು, ಪ್ರಥಮ ಹಂತದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜಿನಲ್ಲಿ ಆರ್.ಬಿ.ಎಸ್.ಕೆ ತಂಡಗಳ ಮೂಲಕ ಮಕ್ಕಳಲ್ಲಿ ರಕ್ತಹೀನತೆ ತಪಾಸಣೆ ಕಾರ್ಯಕ್ರಮ ನಡೆಯಲಿರುವುದರಿಂದ ಎಲ್ಲಾ ಪೋಷಕರು ಈ ಕಾರ್ಯಕ್ರಮದಡಿಯಲ್ಲಿ ತಮ್ಮ ಮಕ್ಕಳ ರಕ್ತಹೀನತೆ ಪರೀಕ್ಷೆಯನ್ನು ಉಚಿತವಾಗಿ ಮಾಡಿಸಿಕೊಂಡು, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.