ಉಡುಪಿ,ಬ್ರಹ್ಮಾವರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಮನವಿ

ಉಡುಪಿ, ಮೇ 31: ಉಡುಪಿ, ಬ್ರಹ್ಮಾವರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಮ ಪಂಚಾಯತ್, ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ ಹಾಗೂ ಬ್ರಹ್ಮಾವರ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಹಾಕಲಾಗಿರುತ್ತದೆ.

ಈ ಆಯ್ಕೆ ಪಟ್ಟಿಯ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಜೂನ್ 6 ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇವರಿಗೆ ಮುದ್ದಾಂ ಆಗಿ ಅಥವಾ ಅವರ ಕಚೇರಿಗೆ ಸಲ್ಲಿಸುವಂತೆ ಉಡುಪಿ ಹಾಗೂ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.