ಉಡುಪಿ: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಮ ಪಂಚಾಯತ್ ವ್ಯಾಪ್ತಿ, ನಗರಸಭೆ ವ್ಯಾಪ್ತಿ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಕಳತ್ತೂರು, ಕುದಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ ಅಂಗನವಾಡಿ ಕೇಂದ್ರಗಳಾದ ಕೊಡಿಬೆಟ್ಟು, ಪೆರ್ಣಂಕಿಲ, ರಾಣ್ಯಕೇರಿ, ಹೇರೂರು, ಕೊಳ, ಕಳತ್ತೂರು, ದುಗ್ಲಿ ಪದವು, ಬೈಲೂರು, ಕೋಟೆಪಟ್ನ ಅಂಗನವಾಡಿ ಕೇಂದ್ರಗಳ ಸಹಾಯಕಿ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 35 ವರ್ಷದೊಳಗಿನ ಎಸ್ಸೆಸ್ಸೆಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳು ಕಾರ್ಯಕರ್ತೆ ಹುದ್ದೆಗೆ ಮತ್ತು ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ (http://udupi.nic.in) ಸಂಪರ್ಕಿಸುವಂತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ


















