ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- 2 ಹುದ್ದೆ ಮತ್ತು ಅಂಗನವಾಡಿ ಸಹಾಯಕಿಯರ- 35 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 35 ವರ್ಷದೊಳಗಿನ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಸ್ಥಳೀಯ ಅಭ್ಯರ್ಥಿಗಳು ಕಾರ್ಯಕರ್ತೆ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು ಸಹಾಯಕಿಯರ ಹುದ್ದೆಗೆ ಮೇ 2 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://udupi.nic.in ಅಥವಾ ಉಡುಪಿ ದೂ.ಸಂಖ್ಯೆ: 0820- 2524055, ಬ್ರಹ್ಮಾವರ ದೂ.ಸಂಖ್ಯೆ: 0820- 2562244, ಕುಂದಾಪುರ ದೂ.ಸಂಖ್ಯೆ: 08254- 230807 ಹಾಗೂ ಕಾರ್ಕಳ ದೂ.ಸಂಖ್ಯೆ: 08258- 230992 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.