ಹಿರಿಯಡಕ: ಉಡುಪಿಯ ಅಷ್ಟಮಠಗಳಲ್ಲೊಂದಾದ ಶಿರೂರು ಮಠದ ನೂತನ ಉತ್ತರಾಧಿಕಾರಿಯಾಗಿ ಅನಿರುದ್ಧ ಸರಳಾತ್ತಾಯ ಸನ್ಯಾಸ ದೀಕ್ಷೆ ಸ್ವೀಕರಿಸಿದರು.
ಸನ್ಯಾಸ ದೀಕ್ಷೆಯ ಅಂಗವಾಗಿ ಹಿರಿಯಡಕದ ಸಮೀಪದ ಶೀರೂರು ಮೂಲಮಠದಲ್ಲಿ ಶಾಕಲ ಹೋಮ, ವಿರಜಾ ಹೋಮ, ಪ್ರೈಶೋಚ್ಚಾರಣೆ ಸೇರಿದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು.
ಸೋದೆ ವಾದಿರಾಜ ಮಠಾಧೀಶರಾದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಯತಿಗಳಿಗೆ ಕಲಶಾಭಿಷೇಕ ನೆರವೇರಿಸಿ ಪ್ರಣವ ಮಂತ್ರೋಪದೇಶ ಮಾಡಿದರು.
ಇಂದು (ಮೇ 14) ಅನಿರುದ್ಧ ಸರಳತ್ತಾಯರ ಪಟ್ಟಾಭಿಷೇಕ ನಡೆಯಲಿದ್ದು, ಶಿರೂರು ಮಠದ ನೂತನ ಉತ್ತರಾಧಿಕಾರಿಯಾಗಲಿದ್ದಾರೆ.