ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಅನಿತಾ ಡಿ’ಸೋಜ ಬೆಳ್ಮಣ್ ಆಯ್ಕೆ

ಕಾರ್ಕಳ: ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಅನಿತಾ ಡಿ’ಸೋಜ ಬೆಳ್ಮಣ್ ಅವರು ಆಯ್ಕೆಯಾಗಿದ್ದಾರೆ.
ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಯಿತು.

ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ ಅವರು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಗೀತಾ ವಾಗ್ಳೆ ಅವರು ನೀಡಿರುವ ಆದೇಶ ಪತ್ರವನ್ನು ಅನಿತಾ ಡಿ’ಸೋಜ ಅವರಿಗೆ ಹಸ್ತಾಂತರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಗೀತಾ ವಾಗ್ಳೆ, ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಕೋಟ ಬ್ಲಾಕ್ ಅಧ್ಯಕ್ಷೆ ಮಮತಾ ಶೆಟ್ಟಿ, ಕಾಪು ಬ್ಲಾಕ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಹೆಬ್ರಿ ಬ್ಲಾಕ್ ಅಧ್ಯಕ್ಷೆ ರಂಜನಿ ಹೆಬ್ಬಾರ್, ನಗರಸಭೆಯ ಮಾಜಿ ಅಧ್ಯಕ್ಷೆ  ಮೀನಾಕ್ಷಿ ಮಾಧವ, ನಾಗೇಶ್ ಕುಮಾರ್ ಉದ್ಯಾವರ, ಹರೀಶ್ ಕಿಣಿ, ಯತೀಶ್ ಕರ್ಕೇರ, ಕೀರ್ತಿ ಶೆಟ್ಟಿ, ಜಿತೇಶ್, ಅಹಮದ್, ಸುಗುಣಾ ಪೂಜಾರ್ತಿ ಮೊದಲಾದವರು ಉಪಸ್ಥಿತರಿದ್ದರು.