ಬೆಂಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂಬಂಧ ಸರ್ಕಾರವು ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಕೋವಿಡ್ ಸೋಂಕು ಪಸರಿಸುವ ಹಿನ್ನಲೆಯಲ್ಲಿ ಹೊಸ ವರ್ಷದ ಅದ್ಧೂರಿ ಆಚರಣೆಗೆ ತಡೆ ನೀಡಿದೆ. ಆದರೆ ಎಂದಿನಂತೆ ಕ್ಲಬ್ ಪಬ್ಗಳನ್ನು ತೆರೆಯಲು ಅವಕಾಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಚರ್ಚ್ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತ ಕಾಯುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.
ಹಬ್ಬದ ಆಚರಣೆಯ ಸಂದರ್ಭದಲ್ಲಿ ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ.
ಕ್ರಿಸ್ಮಸ್ ಹಾಗೂ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳು.
ಹೊಸ ವರ್ಷದ ಸಂದರ್ಭದಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್ ಗಳು ಸಾಮಾನ್ಯ ದಿನಗಳಂತೆ ವ್ಯವಹಾರ ನಡೆಸಲು ಅವಕಾಶವಿದೆ. ಮದ್ಯ ಮಾರಾಟದ ಮೇಲೆ ನಿರ್ಬಂಧವಿಲ್ಲ. ಆದರೆ, ವಿಶೇಷ ಪಾರ್ಟಿ ಹಾಗೂ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಜನರು ಒಂದೆಡೆ ಸೇರುವ ಹಾಗಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದ್ದು, ಕೋವಿಡ್ ಹರಡುವಿಕೆ ತಡೆಯುವ ಸಂಬಂಧ ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.