ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಿನೀ ಸಭಾ ಉಡುಪಿ, ಪರಮ ಪೂಜ್ಯ ಅಷ್ಠಮಠಾಧೀಶರಿಂದ ಸ್ಥಾಪಿತವಾದ ಶ್ರೀಮನ್ಮಧ್ವಸಿದ್ಧಾಂತಪ್ರಬೋಧಿನೀ ಸಂಸ್ಕೃತಮಹಾಪಾಠಶಾಲೆಯ 115 ನೇಯ ವಾರ್ಷಿಕೋತ್ಸವವು ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ನಡೆಯಿತು.
ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.