ಹಿರಿಯಡ್ಕ: ಆಗಸ್ಟ್ 13 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ

ಹಿರಿಯಡ್ಕ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವವು ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಆಗಸ್ಟ್ 13 ಶನಿವಾರದಂದು ಬೆಳಿಗ್ಗೆ 10.30 ಗಂಟೆಗೆ ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದ್ದು, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯಕ್, ಉಪಾಧ್ಯಕ್ಷೆ ಬೊಮ್ಮರಬೆಟ್ಟು ಶ್ರೀಮತಿ ಲತಾ ಸುರೇಶ್, ಬೊಮ್ಮರಬೆಟ್ಟು ಕುದಿ ವಸಂತ ಶೆಟ್ಟಿ, ಸುರೇಶ್ ನಾಯಕ್ ಉಪಸ್ಥಿತರಿರಲಿದ್ದಾರೆ.

ಶ್ರೀಮತಿ ಸುಜಯಾ ಕೆ.ಎಸ್. ಸಂಚಾಲಕರು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಡಾ. ಸೀಮಾ ಜಿ.ಕೆ. ಪ್ರಾಂಶುಪಾಲರು ಸ.ಪ್ರ.ದ.ಕಾಲೇಜು, ಹಿರಿಯಡಕ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು
ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ (ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗ) ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ.

ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ-ರಕ್ಷಕ ಸಂಘ, ಹಿರಿಯ ವಿದ್ಯಾರ್ಥಿಗಳ ಸಂಘ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ, ವಿವಿಧ ಸಮಿತಿಯ ವಿದ್ಯಾರ್ಥಿ ಸಂಚಾರಕರು, ತರಗತಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿ ವೃಂದಸಭಾವು ಸರ್ವರನ್ನು ಆದರದಿಂದ ಸ್ವಾಗತಿಸುತ್ತಿದೆ.

ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.