ರಾಜ್ಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ: ಕರ್ನಾಟಕ ರಾಜ್ಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ 2021 -2022 ನೇ ಸಾಲಿನ ಮೊದಲ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ್ ಉಡುಪ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಅಧ್ಯಕ್ಷರಾದ ವಿಮಲಾ ಎಸ್ ಬಾಯರಿ ಅವರು ವಹಿಸಿದ್ದರು.

ರಾಜ್ಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಅಧ್ಯಕ್ಷೆ ‌ಚಂದ್ರಿಕಾ ಧಮ್ಮಳ್ಳಿ, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಆರ್ ಸಿಎಚ್ ಅಧಿಕಾರಿ ಡಾ. ಎಂ ಜಿ ರಾಮ, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ನಾಗರತ್ನ, ಅಂಕಿತ ಅಧಿಕಾರಿ ಡಾ. ಪ್ರೇಮಾನಂದ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಉಪಸ್ಥಿತರಿದ್ದರು.

ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ತೆರೆಸ ಸ್ವಾಗತಿಸಿದರು. ತುಳಸಿ ಪ್ರಾರ್ಥಿಸಿದರು. ಕುಮುದವತಿ ವಂದಿಸಿದರು. ಯಮುನಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.