ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಕಾಲೇಜಿನ ವಾರ್ಷಿಕೋತ್ಸವ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಸುಬ್ರಹ್ಮಣ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ಶಿಸ್ತಿನ ವ್ಯಾಸಂಗದೊಂದಿಗೆ ದೃಢತೆಯನ್ನು ಮೈಗೂಡಿಸಿಕೊಂಡು ಪ್ರಗತಿ ಪಥದತ್ತ ಸಾಗಬೇಕೆನ್ನುತ್ತಾ ಶುಭಹಾರೈಸಿದರು.
ನಿರ್ದೇಶಕಿ ಮಮತಾ ಮತ್ತು ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್ ಹಾಗೂ ಉಪಪ್ರಾಂಶುಪಾಲೆ ಸುಜಾತ ಮತ್ತು ಸಾಂಸ್ಕೃತಿಕ ಸಮಿತಿಯ ವ್ಯವಸ್ಥಾಪಕಿ ರಝಿಕಾ, ಸಂಸ್ಥೆಯ ಎಲ್ಲಾ ಉಪನ್ಯಾಸಕರ ವೃಂದದವರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಸ್ವಾತಿ ಕಾರ್ಯಕ್ರಮವನ್ನು ನಿರೂಪಿಸಿದರು.