ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಕುಂದಾಪುರ: ವೃತ್ತಿ – ಪ್ರವೃತ್ತಿಗಳಲ್ಲಿ ಸೋಲು ಸ್ವೀಕರಿಸಬಲ್ಲ ಮನೋಭಾವದ ಬೆಳವಣಿಗೆಯೇ ಬದುಕಿನಲ್ಲಿ ಗೆಲ್ಲಬಲ್ಲ ಸಾಮರ್ಥ್ಯ ಸೃಷ್ಟಿಸುತ್ತದೆ ಎಂದು ಕೊಲ್ಲೂರು ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಸೋಮವಾರದಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ, ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿನಿಯರಾದ ಆವಂತಿಕಾ ಸ್ವಾಗತಿಸಿದರು, ರಿಶಾಲ್ ವಂದಿಸಿದರು, ರುತ್ ಕಾರ್ಯಕ್ರಮ ನಿರೂಪಿಸಿದರು.