ಉಡುಪಿ : ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಹಾಗು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟವು ಮಾರ್ಚ್ 28 ಗುರುವಾರದಂದು ಎಸ್.ವಿ.ಎಸ್ ಮೈದಾನ ಪಳ್ಳಿಗುಡ್ಡೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕೆ.ಎಂ.ಸಿ ಮಾಹೆ ಮಣಿಪಾಲದ ದೈಹಿಕ ಶಿಕ್ಷಣ ಉಪ ನಿರ್ದೇಶಕ ಡಾ. ದೀಪಕ್ ರಾಮ್ ಬಾಯರಿ, ಧ್ವಜಾರೋಹಣದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಆರೋಗ್ಯಪೂರ್ಣ ದೇಹಸ್ಥಿತಿಯನ್ನು ಹೊಂದಿರುವುದು ಅತಿ ಮುಖ್ಯ. ದಿನದಲ್ಲಿ ಸರಿಯಾದ ನಿದ್ದೆ ಮತ್ತು ಆರೋಗ್ಯಪೂರ್ಣ ಆಹಾರ ಪದ್ಧತಿಯಿಂದ ಸದೃಢ ಮನಸ್ಸು ಹೊಂದಲು ಸಾಧ್ಯ ಎಂದರು.
ತ್ರಿಶಾ ಸಂಸ್ಥೆಯ ಸಂಸ್ಥಾಪಕ ಸಿ. ಎ ಗೋಪಾಲಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ತಿಂಡಿತಿನಿಸುಗಳ ಸ್ಟಾಲ್ ಗಳನ್ನು ಹಾಕಲಾಗಿತ್ತು.
ಕಾರ್ಯಕ್ರಮದಲ್ಲಿ ಸಿದ್ಧಾಂತ್ ಫೌಂಡೇಶನ್ ನ ಟ್ರಸ್ಟಿ ನಮಿತಾ ಜಿ ಭಟ್, ತ್ರಿಶಾ ವಿದ್ಯಾ ಕಾಲೇಜು ಹಾಗು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಹಾಗೂ ಉಪನ್ಯಾಸಕ ಹಾಗೂ ಕ್ರೀಡಾ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಉಪನ್ಯಾಸಕ ಚೇತನಾ ಸುನಿಲ್ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ಶಶಿಕಿರಣ್ ವಂದಿಸಿದರು.