ಉಡುಪಿ, ಮೇ 28: 2019-20 ನೇ ಸಾಲಿಗೆ ಪರಿಶಿಷ್ಟ ಜಾತಿಯ ಯುವಕ/ ಯುವತಿಯರು ಪರಿಶಿಷ್ಟ ಜಾತಿಯ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದ್ದು, ಸದರಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ತಲಾ 2 ಲಕ್ಷ ರೂ. ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಈ ಸಂಬಂಧ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕಚೇರಿ ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ (ದೂ.ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.