ಬೀದರ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಬಸವಕಲ್ಯಾಣದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಪಕ್ಷದಿಂದ ಮುಂದಿನ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಅವರ ವಿರುದ್ಧ ಖೂಬಾ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಈ ನಿಟ್ಟಿನಲ್ಲಿ ಖೂಬಾ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ ಆದೇಶಿಸಿದ್ದಾರೆ.